ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು

ಟಾಲಿವುಡ್ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬು ನಿನ್ನೆ(ಸಪ್ಟೆಂಬರ್ 24) ಸಂಜೆ ಬೆಂಗಳೂರಿಗೆ ಆಗಮಿಸಿದ್ದರು. ತಮ್ಮ ಹೊಸ ಸಿನಿಮಾ 'ಸ್ಪೈಡರ್' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಹಾಜರಿದ್ದರು.

ಈ ವೇಳೆ ''ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ. ನನಗೆ ಇಲ್ಲಿ ಒಳ್ಳೆಯ ಸ್ನೇಹಿತರಿದ್ದಾರೆ. ಪುನೀತ್ ರಾಜ್ ಕುಮಾರ್ ನನ್ನ ಒಳ್ಳೆಯ ಗೆಳೆಯರು. ಅದ್ದರಿಂದ ಕನ್ನಡದಲ್ಲಿ ನಟಿಸುವುದಕ್ಕೆ ನನ್ನ ಅಭ್ಯಂತರವಿಲ್ಲ'' ಎಂದು ಮಹೇಶ್ ಬಾಬು ಹೇಳಿದ್ದಾರೆ.


'ಸ್ಪೈಡರ್' ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಟಾಕ್ ಸೃಷ್ಟಿ ಮಾಡಿದೆ. ಸ್ಟಾರ್ ಡೈರೆಕ್ಟರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಕುಲ್ ಪ್ರೀತ್ ಸಿಂಗ್ ಪ್ರಿನ್ಸ್ ಗೆ ಜೋಡಿಯಾಗಿದ್ದಾರೆ. ಅಂದಹಾಗೆ, 'ಸ್ಪೈಡರ್' ಸಿನಿಮಾ ಇದೇ ತಿಂಗಳು 27ಕ್ಕೆ ಬಿಡುಗಡೆಯಾಗುತ್ತಿದೆ.

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು Reviewed by VIVEKARAMA on ಸೆಪ್ಟೆಂಬರ್ 28, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.