ಅಕ್ಟೋಬರ್ 22ಕ್ಕೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ

ಸ್ಯಾಂಡಲ್ವುಡ್ ನಲ್ಲಿ ಮತ್ತೊಂದು ತಾರಾ ಜೋಡಿಗೆ ಕಂಕಣಭಾಗ್ಯ ಕೂಡಿಬಂದಿದೆ. ನಟ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಹಿರಿಯ ನಿರ್ಮಾಪಕ ದ್ವಾರಕೀಶ್ ನಿರ್ಮಾಣದ ಆಟಗಾರ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರು ಒಟ್ಟಾಗಿ ಅಭಿನಯಿಸಿದ್ದರು. ಬಹುಕಾಲ ಸ್ನೇಹಿತರಾಗಿದ್ದ ಇವರು ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ.


ಅಕ್ಟೋಬರ್ 22ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದ್ದು ಡಿಸೆಂಬರ್ 6ಕ್ಕೆ ಮದುವೆ ದಿನಾಂಕವನ್ನು ನಿಗದಿಪಡಿಸಲಾಗಿದೆ.


ಮೇಘನಾ ರಾಜ್ ಅವರು ಹಿರಿಯ ನಟ ಸುಂದರ್ ರಾಜ್ ನಟಿ ಪ್ರಮೀಳಾ ಜೋಷಾಯ್ ಅವರು ಏಕೈಕ ಪುತ್ರಿಯಾಗಿದ್ದು ಚಿರಂಜೀವಿ ಸರ್ಜಾ ಹಿರಿಯ ನಟ ಅರ್ಜುನ್ ಸರ್ಜಾ ಅವರ ಕುಟುಂಬದ ಕುಡಿ.

ಅಕ್ಟೋಬರ್ 22ಕ್ಕೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ ಅಕ್ಟೋಬರ್ 22ಕ್ಕೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ Reviewed by VIVEKARAMA on ಅಕ್ಟೋಬರ್ 10, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.