'ಕೃಷ್ಣಲೀಲಾ' ಖ್ಯಾತಿಯ ನಟಿ ಮಯೂರಿ ಈಗ 'ಆಟಕ್ಕುಂಟು ಲೆಕ್ಕಕ್ಕಿಲ್ಲ'

ಶೀರ್ಷಿಕೆ ನೋಡಿದ ತಕ್ಷಣ ''ನಟಿ ಮಯೂರಿ 'ಆಟಕ್ಕುಂಟು ಲೆಕ್ಕಕ್ಕಿಲ್ವಾ'? ಕನ್ನಡದಲ್ಲಿ ಈಗ ಮಯೂರಿಗೆ ಡಿಮ್ಯಾಂಡ್ ಇಲ್ವಾ?'' ಅಂತೆಲ್ಲ ಯೋಚನೆ ಮಾಡಬೇಡಿ. ಯಾಕಂದ್ರೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ' ಎನ್ನುವುದು ಮಯೂರಿ ಮುಂದಿನ ಚಿತ್ರದ ಹೆಸರು.

'ಆಟಕ್ಕುಂಟು ಲೆಕ್ಕಕ್ಕಿಲ್ಲ' ಎನ್ನುವ ಹೊಸ ಚಿತ್ರದಲ್ಲಿ ಮಯೂರಿ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಮಯೂರಿ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಸೀರೆ ಉಟ್ಟು ಮಯೂರಿ ವಿವಾಹಿತ ಮಹಿಳೆಯಂತೆ ಕಾಣಿಸಿಕೊಂಡಿದ್ದಾರೆ.


ಅಂದಹಾಗೆ, ಈಗಾಗಲೇ 'ಕೃಷ್ಣ ಲೀಲಾ', 'ಇಷ್ಟ ಕಾಮ್ಯ' ಚಿತ್ರಗಳಲ್ಲಿ ಮಯೂರಿ ನಟಿಸಿದ್ದಾರೆ. ಜೊತೆಗೆ ಅವರ 'ಕರಿಯ 2' ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ ಇತ್ತೀಚಿಗಷ್ಟೆ ಇಂಗ್ಲೀಷ್ ಹಾಡೊಂದರಲ್ಲಿ ಮಯೂರಿ ಹೆಜ್ಜೆ ಹಾಕಿದ್ದರು.

'ಕೃಷ್ಣಲೀಲಾ' ಖ್ಯಾತಿಯ ನಟಿ ಮಯೂರಿ ಈಗ 'ಆಟಕ್ಕುಂಟು ಲೆಕ್ಕಕ್ಕಿಲ್ಲ' 'ಕೃಷ್ಣಲೀಲಾ' ಖ್ಯಾತಿಯ ನಟಿ ಮಯೂರಿ ಈಗ 'ಆಟಕ್ಕುಂಟು ಲೆಕ್ಕಕ್ಕಿಲ್ಲ' Reviewed by VIVEKARAMA on ಅಕ್ಟೋಬರ್ 16, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.